LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Politics News

*ಬಳ್ಳಾರಿ ಚಲೋ: ಬೆಳಗಾವಿಯಿಂದ ಸಾವಿರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಭಾಗಿ*

 

ಬೆಳಗಾವಿ: ಭ್ರಷ್ಟ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆಯುತ್ತಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆಯ ಐದನೇ ದಿನದ ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲೆಯಿಂದ ಸಾವಿರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದರು.

ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಗಳು ಹಾಗೂ ವಿವಿಧ ಜನಪರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಹಮ್ಮಿಕೊಂಡಿರುವ ಈ ಪಾದಯಾತ್ರೆಯಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉತ್ಸಾಹದಿಂದ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಬಿಜೆಪಿ ಬೆಳಗಾವಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಮಾಜಿ ಶಾಸಕರಾದ ಮಹಾಂತೇಶ ದೊಡ್ಡಗೌಡ್ರ ಹಾಗೂ ಅರವಿಂದ ಪಾಟೀಲ ಸೇರಿದಂತೆ ಪಕ್ಷದ ಹಲವು ಪ್ರಮುಖ ಮುಖಂಡರು ಪಾದಯಾತ್ರೆಯಲ್ಲಿ ಭಾಗವಹಿಸಿದರು.

ಮುಖಂಡರಾದ ವಿಜಯ ಮೆಟಗುಡ್ಡ, ಮಲ್ಲಣ್ಣ ಯಾದವಾಡ, ಜಗದೀಶ್ ಬೂದಿಹಾಳ, ಸಚಿನ್ ಕಡಿ, ವೀರಪಾಕ್ಷಿ ಮಾಮನಿ, ಸಿ.ಬಿ. ಪಾಟೀಲ, ಬಸವರಾಜ ಸೋಮಗೊಂಡ, ಮಹಾದೇವ ಶೆಕ್ಕಿ, ಭೀಮಶಿ ಭರಮಣ್ಣವರ, ಕೆ.ವಿ. ಪಾಟೀಲ, ಮಂಜುನಾಥ ಪಮ್ಮಾರ, ಪಿ.ಎಫ್. ಪಾಟೀಲ, ಈರಣ್ಣ ಚಂದರಗಿ, ಚೇತನ್ ಅಂಗಡಿ, ಪ್ರಫುಲ್ ಪಾಟೀಲ, ಪ್ರಮೋದ ನುಗ್ಗಾನಟ್ಟಿ, ಸಂತೋಷ ಹಡಪದ ಹಾಗೂ ನಾಗಪ್ಪ ಸಂಗೋಳ್ಳಿ ಸೇರಿದಂತೆ ಹಲವು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಬಳ್ಳಾರಿ ಚಲೋ ಪಾದಯಾತ್ರೆಯ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಪಕ್ಷದ ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಬೆಳಗಾವಿ ಜಿಲ್ಲೆಯಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿರುವುದು ಪಕ್ಷದ ಸಂಘಟನಾ ಬಲವನ್ನು ಪ್ರದರ್ಶಿಸಿದೆ.

Author
D Media 24
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
*₹2,000ಕ್ಕಿಂತ ಹೆಚ್ಚಿನ UPI ವಹಿವಾಟುಗಳಿಗೆ MDR ಶುಲ್ಕ; ಅಕ್ಟೋಬರ್ 15ರಿಂದ ಹೊಸ ನಿಯಮ**ಖಾನಾಪುರ ತಾಲೂಕನ್ನು ಬರಪೀಡಿತ ಎಂದು ಘೋಷಿಸಿ; ರೈತರ ಸಂಪೂರ್ಣ ಸಾಲಮನ್ನಾ ಹಾಗೂ ಕೃತಕ ಮಳೆಯ ಬೇಡಿಕೆ ತಹಶೀಲ್ದಾರ್‌ಗೆ ರೈತರ ಮನವಿ; ಬೆಳೆ ನಷ್ಟದ ಪಂಚನಾಮೆ ನಡೆಸಿ ತಕ್ಷಣ ಪರಿಹಾರ ನೀಡುವಂತೆ ಒತ್ತಾಯ**ಕಂಗ್ರಾಳಿ ಬಿಕೆಯ ಕಸದ ಬ್ಲ್ಯಾಕ್ ಸ್ಪಾಟ್ ತೆರವು; ಅಮಿತ್ ಸುತಾರ್ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ ಕಸ ಹಾಕುವವರಿಗೆ ₹500 ದಂಡ; ಸಿಸಿಟಿವಿ ಕ್ಯಾಮೆರಾ ವ್ಯವಸ್ಥೆ**ಅಲತಗಾ ಕ್ರಾಸ್ ಬಳಿ ಬೇಕರಿಗೆ ಬೆಂಕಿ; ₹12 ಲಕ್ಷ ನಷ್ಟ, ಮಲಗೌಡ ಪಾಟೀಲ ಭೇಟಿ**ಚವ್ಹಾಟಗಲ್ಲಿಯ ಫ್ರಿಡ್ಜ್ ಸ್ಫೋಟದ ಸ್ಥಳಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ*ನಗರ ಪಂಚಾಯಿತಿಯ ನಿರ್ಲಕ್ಷ್ಯ ಆಡಳಿತದ ವಿರುದ್ಧ ವಿವೇಕ ಗಿರಿ ಅವರ ಎಲ್ಗಾರ್; ಸೆಪ್ಟೆಂಬರ್ 16 ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ.*ಗೋವಾ ವಿಧಾನಸಭೆ ಚುನಾವಣೆ: AICC ಸಂಯೋಜಕರಾಗಿ ಮೃಣಾಲ್ ಹೆಬ್ಬಾಳಕರ್ ನೇಮಕ ಬೆಳಗಾವಿ ಯುವ ಮುಖಂಡನಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ**ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗೆ ವೇಗ: ಲಕ್ಷ್ಮೀ ಹೆಬ್ಬಾಳಕರ್ ಪರಿಶೀಲನೆ**ಅನಿಯಮಿತ ವಿದ್ಯುತ್ ಪೂರೈಕೆ ಖಂಡಿಸಿ ಬಿಜೆಪಿ ಪ್ರತಿಭಟನೆ; ಪಂತ ಬಾಳೇಕುಂದ್ರಿ ವಿದ್ಯುತ್ ಕೇಂದ್ರದ ಎದುರು ರಸ್ತೆ ತಡೆ**₹65 ಲಕ್ಷ ವೆಚ್ಚದಲ್ಲಿ ಶ್ರೀ ವಿಠ್ಠಲ ರುಕ್ಮಾಯಿ ಮಂದಿರ ನಿರ್ಮಾಣ ಸ್ಲ್ಯಾಬ್ ಕಾಮಗಾರಿಗೆ ಮೃಣಾಲ್ ಹೆಬ್ಬಾಳಕರ್ ಸೇರಿ ಗಣ್ಯರಿಂದ ಪೂಜೆ*